ಜೋಹಾನ್ಸ್ ಬರ್ಗ್, 15 ಡಿಸೆಂಬರ್(ಹಿ.ಸ):
ಆ್ಯಂಕರ್ :
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಟಿ20 ಸರಣಿ ಮುಕ್ತಾಯಗೊಂಡಿದೆ. ಮೂರು ಪಂದ್ಯಗಳ ಟಿ20 ಸರಣಿ 1-1 ಅಂಕಗಳ ಅಂತರದಿಂದ ಸಮಬಲ ಕಂಡಿದೆ. ಮೊದಲ ಪಂದ್ಯ ಮಳೆಯಿಂದ ರದ್ದಾದರೆ, ದ್ವಿತೀಯ ಪಂದ್ಯದಲ್ಲಿ ಆಫ್ರಿಕಾ 5 ವಿಕೆಟ್ಗಳ ಜಯ ಸಾಧಿಸಿತ್ತು. ಗುರುವಾರ ನಡೆದ ಮೂರನೇ ಟಿ20ಯಲ್ಲಿ ಟೀಮ್ ಇಂಡಿಯಾ 106 ರನ್ಗಳಿಂದ ಜಯಿಸಿತು. ಇದೀಗ ಉಭಯ ತಂಡಗಳು ಏಕದಿನ ಸರಣಿಗೆ ಸಜ್ಜಾಗಬೇಕಿದೆ. ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಡಿಸೆಂಬರ್ 17 ಭಾನುವಾರದಂದು ಭಾರತ vs ದಕ್ಷಿಣ ಆಫ್ರಿಕಾ ಪ್ರಥಮ ಏಕದಿನ ಪಂದ್ಯ ನಡೆಯಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ಮೊದಲ ಏಕದಿನ ಪಂದ್ಯ ಜೋಹಾನ್ಸ್ಬರ್ಗ್ನ ನ್ಯೂ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಹಿಂದೂಸ್ತಾನ್ ಸಮಾಚಾರ್
