ವೈಜಾಗ್ , 21ನವೆಂಬರ್ (ಹಿ.ಸ):
ಆ್ಯಂಕರ್ :ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿ ಮುಕ್ತಾಯದ ಬೆನ್ನಲ್ಲೇ ಇದೇ ೨೩ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಟಿ೨೦ ಕ್ರಿಕೆಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಭಾರತದ ಸ್ಫೋಟಕ ಬ್ಯಾಟ್ಸ್ಮನ್ ಸೂರ್ಯ ಕುಮಾರ್ ಯಾದವ್ಗೆ ತಂಡದ ಸಾರಥ್ಯ ನೀಡಲಾಗಿದೆ.
ಇದೇ ೨೩ ರಿಂದ ವಿಶಾಖಪಟ್ಟಣಂನಲ್ಲಿ ಮೊದಲ ಪಂದ್ಯ ನಡೆಯಲಿದೆ. ಡಿಸೆಂಬರ್ ೩ ರಂದು ಬೆಂಗಳೂರಿನಲ್ಲಿ ಕೊನೆಯ ಪಂದ್ಯ ನಡೆಯಲಿದೆ.
ವಿವಿಎಸ್ ಲಕ್ಷ್ಮಣ್ ಈ ಸರಣಿಗೆ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ವಿಶ್ವಕಪ್ನಲ್ಲಿ ಆಡಿರುವ ಭಾರತ ತಂಡದ ಎಲ್ಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್
