ರಾಯ್ ಪುರ, 1 ಡಿಸೆಂಬರ್(ಹಿ.ಸ):
ಆ್ಯಂಕರ್ :
ಇಂದು ರಾಯ್ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಾಲ್ಕನೇ ಟಿ20 ಪಂದ್ಯ ನಡೆಯಲಿದೆ. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ಈಗಾಗಲೇ 2-1 ಅಂತರದಿಂದ ಮುನ್ನಡೆ ಪಡೆಕೊಂಡಿದ್ದು, ಇಂದಿನ ಪಂದ್ಯ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ. ಕಾಂಗರೂ ಪಡೆಗೆ ಉಳಿದ ಎರಡೂ ಪಂದ್ಯ ಗೆಲ್ಲಲೇ ಬೇಕಿದೆ. ಕಳೆದ ಪಂದ್ಯದಲ್ಲಿ ಭಾರತ 200 ರನ್ ಕಲೆಹಾಕಿದರೂ ಸೋಲುಂಡಿತ್ತು. ಹೀಗಾಗಿ ಟೀಮ್ ಇಂಡಿಯಾ ಯೋಜನೆ ರೂಪಿಸಿ ಕಣಕ್ಕಿಳಿಯಬೇಕಿದೆ. ಹೀಗೆ ಅನೇಕ ಕಾರಣಗಳಿಂದ ಉಭಯ ತಂಡಗಳ ಇಂದಿನ ಕಾದಾಟ ಸಾಕಷ್ಟು ರೋಚಕತೆ ಸೃಷ್ಟಿಸಿದೆ.
ಹಿಂದೂಸ್ತಾನ್ ಸಮಾಚಾರ್
