ಮುಂಬೈ, 24 ಡಿಸೆಂಬರ್(ಹಿ.ಸ):
ಆ್ಯಂಕರ್ :
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ಮಹಿಳಾ ತಂಡಗಳ ನಡುವಿನ ಏಕೈಕ ಟೆಸ್ಟ್ ಕ್ರಿಕೆಟ್ ಪಂದ್ಯದ ನಾಲ್ಕನೇ ದಿನದಾಟ ಇಂದು ಮುಂದುವರಿಯಲಿದೆ. ಮೂರನೇ ದಿನದಾಟದ ಮುಕ್ತಾಯಕ್ಕೆ ಆಸ್ಟ್ರೇಲಿಯಾ ತನ್ನ ದ್ವಿತೀಯ ಇನಿಂಗ್ಸ್ ನಲ್ಲಿ ೫ ವಿಕೆಟ್ ನಷ್ಟಕ್ಕೆ ೨೩೩ ರನ್ ಗಳಿಸಿದ್ದು, ೪೬ ರನ್ ಗಳ ಮುನ್ನಡೆ ಸಾಧಿಸಿದೆ. ಇದಕ್ಕೂ ಮುನ್ನ ಭಾರತ ಮೊದಲ ಇನಿಂಗ್ಸ್ ನಲ್ಲಿ ೪೦೬ ರನ್ ಗಳಿಸಿದರೆ, ಆಸ್ಟ್ರೇಲಿಯಾ ೨೧೯ ರನ್ ಗಳಿಗೆ ಆಲೌಟಾಗಿತ್ತು.
ಹಿಂದೂಸ್ತಾನ್ ಸಮಾಚಾರ್
