ಪಾರ್ಲ್, 21 ಡಿಸೆಂಬರ್(ಹಿ.ಸ):
ಆ್ಯಂಕರ್ :ಭಾರತ-ಸೌತ್ ಆಫ್ರಿಕಾ ನಡುವಣ ಮೂರನೇ ಟಿ20 ಪಂದ್ಯವು ಇಂದು (ಡಿ.21) ನಡೆಯಲಿದೆ. ಪಾರ್ಲ್ನ ಬೋಲ್ಯಾಂಡ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಸರಣಿ ನಿರ್ಣಾಯಕ. ಏಕೆಂದರೆ ಮೂರು ಪಂದ್ಯಗಳ ಸರಣಿಯ ಮೊದಲ ಮ್ಯಾಚ್ನಲ್ಲಿ ಭಾರತ ತಂಡ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ಸೌತ್ ಆಫ್ರಿಕಾ ಭರ್ಜರಿ ಗೆಲುವು ದಾಖಲಿಸಿತು. ಇದೀಗ ಮೂರನೇ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿ ವಶಪಡಿಸಿಕೊಳ್ಳಲಿದೆ.ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಶ್ರೇಯಸ್ ಅಯ್ಯರ್ ಕಾಣಿಸಿಕೊಳ್ಳುವುದಿಲ್ಲ. ಅಯ್ಯರ್ ಈಗಾಗಲೇ ಭಾರತ ಟೆಸ್ಟ್ ಬಳಗವನ್ನು ಸೇರಿಕೊಂಡಿದ್ದಾರೆ. ಹೀಗಾಗಿ ಅವರ ಸ್ಥಾನದಲ್ಲಿ ಇಂದಿನ ಪಂದ್ಯದಲ್ಲೂ ರಿಂಕು ಸಿಂಗ್ ಕಣಕ್ಕಿಳಿಯಲಿದ್ದಾರೆ.
ಉಭಯ ತಂಡಗಳ ಮುಖಾಮುಖಿ:
ಭಾರತ-ಸೌತ್ ಆಫ್ರಿಕಾ ತಂಡಗಳು ಏಕದಿನ ಕ್ರಿಕೆಟ್ನಲ್ಲಿ 93 ಬಾರಿ ಮುಖಾಮುಖಿಯಾಗಿವೆ. ಈ ವೇಳೆ 51 ಪಂದ್ಯಗಳಲ್ಲಿ ಸೌತ್ ಆಫ್ರಿಕಾ ತಂಡವೇ ಜಯ ಸಾಧಿಸಿದೆ. ಇನ್ನು ಟೀಮ್ ಇಂಡಿಯಾ ಗೆದ್ದಿರುವುದು 39 ಪಂದ್ಯಗಳಲ್ಲಿ ಮಾತ್ರ. ಹಾಗೆಯೇ ಮೂರು ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿತ್ತು.
ಹಿಂದೂಸ್ತಾನ್ ಸಮಾಚಾರ್
