ಮುಂಬೈ, 8 ಜನವರಿ(ಹಿ.ಸ):
ಆ್ಯಂಕರ್ :
ನವೀ ಮುಂಬೈಯ ಡಿ.ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಿನ್ನೆ ರಾತ್ರಿ ಭಾರತ-ಆಸ್ಟ್ರೇಲಿಯಾ ನಡುವೆ ನಡೆದ ಮಹಿಳೆಯರ ಅಂತಾರಾಷ್ಟ್ರೀಯ ಎರಡನೇ ಟಿ- ೨೦ ಕ್ರಿಕೆಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ೬ ವಿಕೆಟ್ಗಳ ಅಂತರದ ಜಯ ಸಾಧಿಸಿದೆ. ಈ ಮೂಲಕ ಆಸ್ಟ್ರೇಲಿಯಾ ಸರಣಿಯನ್ನು ೧-೧ರಲ್ಲಿ ಸಮಬಲ ಮಾಡಿಕೊಂಡಿದೆ. ಭಾರತ ನೀಡಿದ ೧೩೧ ರನ್ಗಳ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ೧೯ ಓವರ್ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ ೧೩೩ ರನ್ ಮಾಡಿತು. ಮೂರನೇ ಟಿ-೨೦ ಪಂದ್ಯ ನಾಳೆ ನವಿ ಮುಂಬೈಯ ಡಿ ವೈ ಪಾಟೀಲ್ ಕ್ರೀಡಾಂಗಣದಲ್ಲಿ ಸಂಜೆ ೭ ಗಂಟೆಗೆ ನಡೆಯಲಿದೆ.
ಹಿಂದೂಸ್ತಾನ್ ಸಮಾಚಾರ್
