ಬೆಂಗಳೂರು , 12ನವೆಂಬರ್ (ಹಿ.ಸ):
ಆ್ಯಂಕರ್ :
ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿಂದು ಲೀಗ್ ಸುತ್ತಿನ ಕೊನೆಯ ಪಂದ್ಯ ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಸ್ಕಾಟ್ ಎಡ್ವರ್ಡ್ಸ್ ನೇತೃತ್ವದ ನೆದರ್ಲೆಂಡ್ಸ್ ತಂಡಗಳು ಮುಖಾಮುಖಿ ಆಗಲಿದೆ. ಪಾಯಿಂಟ್ ಟೇಬಲ್ನಲ್ಲಿ ಅಗ್ರಸ್ಥಾನ ಪಡೆದು ಈಗಾಗಲೇ ಸೆಮಿ ಫೈನಲ್ಗೇರಿರುವ ಟೀಮ್ ಇಂಡಿಯಾಕ್ಕೆ ಇದೊಂದು ಔಪಚಾರಿಕ ಪಂದ್ಯ. ಇತ್ತ ನೆದರ್ಲೆಂಡ್ಸ್ ಟೂರ್ನಿಯಿಂದ ಹೊರಬಿದ್ದಾಗಿದೆ. ಹೀಗಿದ್ದರೂ ಈ ಪಂದ್ಯ ಕುತೂಹಲ ಕೆರಳಿಸಿದೆ.
ಭಾರತದಲ್ಲಿ ಬದಲಾವಣೆ?:
ಭಾರತಕ್ಕೆ ಇಂದಿನ ಪಂದ್ಯ ಲೆಕ್ಕಕ್ಕಿಲ್ಲದ ಕಾರಣ ಕೆಲ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ನಾಯಕ ರೋಹಿತ್ ಶರ್ಮಾ, ಕುಲ್ದೀಪ್ ಯಾದವ್ ಹಾಗೂ ಜಸ್ಪ್ರಿತ್ ಬುಮ್ರಾ ಹೊರಗುಳಿಯಬಹುದು. ಕೆಎಲ್ ರಾಹುಲ್ ನಾಯಕನಾಗಿ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ. ರೋಹಿತ್ ಜಾಗಕ್ಕೆ ಇಶಾನ್ ಕಿಶನ್ ಬರಬಹುದು. ಹಾಗೆಯೆ ಶಾರ್ದೂಲ್ ಥಾಕೂರ್ ಮತ್ತು ಆರ್. ಅಶ್ವಿನ್ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಂಡರೆ ಅಚ್ಚರಿ ಪಡಬೇಕಿಲ್ಲ. ಉಳಿದಂತೆ ತಂಡದಲ್ಲಿ ಬದಲಾವಣೆ ಅನುಮಾನ. ಫಾರ್ಮ್ನಲ್ಲಿರುವ ವಿರಾಟ್ ಕೊಹ್ಲಿ ಬೆಂಗಳೂರಿನಲ್ಲಿ ಶತಕ ಸಿಡಿಸಿ ಸಚಿನ್ ದಾಖಲೆ ಮುರಿಯುತ್ತಾರ ನೋಡಬೇಕು.
ಹಿಂದೂಸ್ತಾನ್ ಸಮಾಚಾರ್
