ಅಹ್ಮದಾಬಾದ್,10ನವೆಂಬರ್ (ಹಿ.ಸ):
ಆ್ಯಂಕರ್ :ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿಂದು ಕುತೂಹಲಕಾರಿ ಪಂದ್ಯ ನಡೆಯಲಿದೆ. ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿರುವ 42ನೇ ಪಂದ್ಯದಲ್ಲಿ ತೆಂಬ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ಹಾಗೂ ಹಶ್ಮತುಲ್ಲಾ ಶಾಹಿದಿ ನೇತೃತ್ವದ ಅಫ್ಘಾನಿಸ್ತಾನ ತಂಡ ಮುಖಾಮುಖಿ ಆಗುತ್ತಿದೆ. ಆಫ್ರಿಕಾ ಈಗಾಗಲೇ ಸೆಮಿ ಫೈನಲ್ಗೆ ಲಗ್ಗೆಯಿಟ್ಟಿದ್ದರೆ, ಇತ್ತ ಅಫ್ಘಾನ್ ಬಹುತೇಕ ಟೂರ್ನಿಯಿಂದ ಹೊರಬಿದ್ದಿದೆ. ಆದರೆ, ಈ ಬಾರಿ ಕ್ರಿಕೆಟ್ ಶಿಶುಗಳು ನೀಡಿರುವ ಪ್ರದರ್ಶನ ಎಲ್ಲರಲ್ಲೂ ಅಚ್ಚರಿ ಮೂಡಿಸಿರುವ ಕಾರಣ ಇಂದಿನ ಪಂದ್ಯ ರೋಚಕತೆ ಸೃಷ್ಟಿಸಿದೆ.
ಹಿಂದೂಸ್ತಾನ್ ಸಮಾಚಾರ್
