ನವದೆಹಲಿ,11ನವೆಂಬರ್ (ಹಿ.ಸ):
ಆ್ಯಂಕರ್ :
ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿಂದು ಎರಡು ಪಂದ್ಯಗಳನ್ನು ಆಯೋಜಿಸಲಾಗಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಬೆಳಗ್ಗೆ 10:30ಕ್ಕೆ ಶುರುವಾಗಲಿರುವ ಮೊದಲ ಮ್ಯಾಚ್ನಲ್ಲಿ ಪ್ಯಾಟ್ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿ ಆಗಲಿದೆ. ಮಧ್ಯಾಹ್ನ ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆಯಲಿರುವ ದ್ವಿತೀಯ ಪಂದ್ಯ ರೋಚಕತೆ ಸೃಷ್ಟಿಸಿದ್ದು, ಇಂಗ್ಲೆಂಡ್ ಹಾಗೂ ಪಾಕಿಸ್ತಾನ ಸೆಣೆಸಾಟ ನಡೆಸಲಿದೆ.
ಹಿಂದೂಸ್ತಾನ್ ಸಮಾಚಾರ್
