ಮುಂಬೈ, 24ಅಕ್ಟೋಬರ್ (ಹಿ.ಸ):
ಆ್ಯಂಕರ್ :
ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಇಂದು ನಡೆಯಲಿರುವ 23ನೇ ಪಂದ್ಯದಲ್ಲಿ ಟೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ಹಾಗೂ ಶಕಿಬ್ ಅಹ್ ಹಸನ್ ನೇತೃತ್ವದ ಬಾಂಗ್ಲಾದೇಶ ತಂಡಗಳು ಸೆಣೆಸಾಟ ನಡೆಸಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಹೈವೋಲ್ಟೇಜ್ ಪಂದ್ಯವನ್ನು ಏರ್ಪಡಿಸಲಾಗಿದೆ. ಉಭಯ ತಂಡಗಳು ಇದುವರೆಗೆ ಒಟ್ಟು ನಾಲ್ಕು ಪಂದ್ಯಗಳನ್ನು ಆಡಿದೆ. ಇದರಲ್ಲಿ ಆಫ್ರಿಕಾ ಮೂರು ಜಯ, ಒಂದು ಸೋಲಿನೊಂದಿಗೆ 6 ಅಂಕ ಪಡೆದು ಮೂರನೇ ಸ್ಥಾನದಲ್ಲಿದ್ದರೆ, ಬಾಂಗ್ಲಾ ಮೂರು ಸೋಲುಂಡು ಆರನೇ ಸ್ಥಾನದಲ್ಲಿದೆ. ಆಫ್ರಿಕಾ ಇಂದಿನ ಪಂದ್ಯ ಗೆದ್ದರೆ ಟಾಪ್ 2ಗೆ ಏರಲಿದೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಐಸಿಸಿ ಪುರುಷರ ವಿಶ್ವಕಪ್ ಏಕದಿನ ಪಂದ್ಯದಲ್ಲಿ ಇಂದು ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಲಿವೆ. ಮಧ್ಯಾಹ್ನ ೨ ಗಂಟೆಗೆ ಪಂದ್ಯ ಆರಂಭವಾಗಲಿದೆ.
ಹಿಂದೂಸ್ತಾನ್ ಸಮಾಚಾರ್
