ಲಖನೌ, 29ಅಕ್ಟೋಬರ್ (ಹಿ.ಸ):
ಆ್ಯಂಕರ್ :
ಐಸಿಸಿ ಏಕದಿನ ವಿಶ್ವಕಪ್ನಲ್ಲಿಂದು ಮಹತ್ವದ ಪಂದ್ಯ ನಡೆಯಲಿದೆ. ಲಖನೌದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಆಯೋಜಿಸಲಾಗಿರುವ 29ನೇ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಜೋಸ್ ಬಬ್ಲರ್ ನೇತೃತ್ವದ ಇಂಗ್ಲೆಂಡ್ ಮುಖಾಮುಖಿ ಆಗಲಿದೆ. ಆಂಗ್ಲರಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಇತ್ತ ಅಗ್ರಸ್ಥಾನದ ಮೇಲೆ ಕಣ್ಣಿಟ್ಟಿರುವ ಟೀಮ್ ಇಂಡಿಯಾ ಗೆಲುವಿನ ಮೇಲೆ ಕಣ್ಣಿಟ್ಟಿದೆ.
ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಬದಲಾವಣೆ ಅನುಮಾನ. ಮತ್ತೊಂದೆಡೆ ರವಿಚಂದ್ರನ್ ಅಶ್ವಿನ್ ಆಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಆದರೆ, ಯಾರ ಜಾಗದಲ್ಲಿ ಆಡುತ್ತಾರೆ ಎಂಬುದು ನೋಡಬೇಕಿದೆ. ಮೊಹಮ್ಮದ್ ಶಮಿ ಕಳೆದ ನ್ಯೂಝಿಲೆಂಡ್ ವಿರುದ್ಧದ ತಮ್ಮ ಚೊಚ್ಚಲ ಪಂದ್ಯದಲ್ಲೇ 5 ವಿಕೆಟ್ ಕಿತ್ತು ಮಿಂಚಿದ್ದರು. ಹೀಗಾಗಿ ಇವರನ್ನು ಕೈಬಿಡುವುದು ಅನುಮಾನ. ಮೊಹಮ್ಮದ್ ಸಿರಾಜ್ ಅಥವಾ ಕುಲ್ದೀಪ್ ಯಾದವ್ಗೆ ವಿಶ್ರಾಂತಿ ನೀಡಿ ಅಶ್ವಿನ್ ಆಡಿಸಿದರೆ ಅಚ್ಚರಿ ಪಡಬೇಕಿಲ್ಲ.
ಹಿಂದೂಸ್ತಾನ್ ಸಮಾಚಾರ್
