ಬೆಂಗಳೂರು , 6ನವೆಂಬರ್ (ಹಿ.ಸ):
ಆ್ಯಂಕರ್ :
ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಭಾರತ ಕ್ರಿಕೆಟ್ ತಂಡದ ಅದ್ಭುತ ಪ್ರದರ್ಶನ ಮುಂದುವರೆದಿದೆ. ಭಾನುವಾರ ಈಡನ್ ಗಾರ್ಡನ್ಸ್ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ 243 ರನ್ಗಳ ಅಮೋಘ ಗೆಲುವು ಕಂಡಿತು. ಇದರೊಂದಿಗೆ ರೋಹಿತ್ ಶರ್ಮಾ ಆಡಿದ ಎಲ್ಲ ಎಂಟು ಪಂದ್ಯ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನ ಕಾಪಾಡಿಕೊಂಡಿದೆ. ಇದೀಗ ಸೆಮಿ ಫೈನಲ್ಗು ಮುನ್ನ ಭಾರತ ತನ್ನ ಕೊನೆಯ ಪಂದ್ಯವನ್ನು ಆಡಲು ಸಜ್ಜಾಗಬೇಕಿದೆ.
ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ವಿಶ್ವಕಪ್ ಪಂದ್ಯ ನವೆಂಬರ್ 12 ರಂದು (ಭಾನುವಾರ) ನಡೆಯಲಿದೆ.ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ವಿಶ್ವಕಪ್ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ.
ಹಿಂದೂಸ್ತಾನ್ ಸಮಾಚಾರ್
