ಮಂಗಳೂರು, 24 ನವೆಂಬರ್ (ಹಿ.ಸ):
ಆ್ಯಂಕರ್ : ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಮಂಗಳೂರಿನ ಎಮ್ಮೆಕೆರೆ ಬಳಿ ನೂತನವಾಗಿ ನಿರ್ಮಿಸಿರುವ ಅಂತಾರಾಷ್ಟ್ರೀಯ ಈಜುಕೊಳವನ್ನು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್. ಸುರೇಶ(ಬೈರತಿ) ಉದ್ಘಾಟಿಸುವುದರ ಮೂಲಕ 19ನೇ ರಾಷ್ಟ್ರೀಯ ಈಜು ಚಾಂಪಿಯನ್ಷಿಪ್ ಪಂದ್ಯಗಳಿಗೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಜಿಲ್ಲೆ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಮಂಜುನಾಥ್ ಭಂಡಾರಿ, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್. ಕೆ.ಅತೀಕ್,ಜಿಲ್ಲಾಧಿಕಾರಿ ಮುಲ್ಲೈ ಮಹಿಲನ್ ಸೇರಿದಂತೆ ಜಿಲ್ಲೆಯ ಹಲ ಜನಪ್ರತಿನಿಧಿಗಳು, ಅಧಿಕಾರಿ ವರ್ಗದವರು ಹಾಗೂ ಈಜು ಸ್ಪರ್ಧಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್
