ಬೆಂಗಳೂರು,26ಅಕ್ಟೋಬರ್ (ಹಿ.ಸ):
ಆ್ಯಂಕರ್ :25ನೇ ಏಕದಿನ ವಿಶ್ವಕಪ್ ಪಂದ್ಯ ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವೆ ನಡೆಯಲಿದೆ.ಈ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಇನ್ನೂ ಜೀವಂತವಾಗಿರಬೇಕೆಂದರೆ ಇಂಗ್ಲೆಂಡ್ ಮತ್ತು ಶ್ರೀಲಂಕಾ ಎರಡೂ ತಂಡಗಳಿಗೆ ಈ ಪಂದ್ಯದಲ್ಲಿ ಗೆಲುವು ನಿರ್ಣಾಯಕವಾಗಿದೆ. ಹೀಗಾಗಿ ಎರಡೂ ತಂಡಗಳು ಗೆಲುವಿಗಾಗಿ ಭರ್ಜರಿ ಹೋರಾಟ ನಡೆಸಲಿವೆ ಎಂದು ನಿರೀಕ್ಷಿಸಲಾಗಿದೆ. ಶ್ರೀಲಂಕಾ 2 ಅಂಕಗಳೊಂದಿಗೆ ಎಂಟನೇ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್ ಕೂಡ 2 ಅಂಕಗಳೊಂದಿಗೆ ಒಂಬತ್ತನೇ ಸ್ಥಾನದಲ್ಲಿದೆ. ವಿಶ್ವಕಪ್ನಲ್ಲಿ ಉಭಯ ತಂಡಗಳು 11 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಇಂಗ್ಲೆಂಡ್ 6 ಪಂದ್ಯಗಳನ್ನು ಗೆದ್ದಿದ್ದರೆ, ಶ್ರೀಲಂಕಾ 5 ಪಂದ್ಯಗಳನ್ನು ಗೆದ್ದಿದೆ. ಎರಡೂ ತಂಡಗಳು ಏಕದಿನ ಕ್ರಿಕೆಟ್ನಲ್ಲಿ 78 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಇಂಗ್ಲೆಂಡ್ 38 ಬಾರಿ ಗೆದ್ದಿದ್ದರೆ, ಶ್ರೀಲಂಕಾ 36 ಬಾರಿ ಗೆದ್ದಿದೆ. ಹೀಗಾಗಿ ಈ ಪಂದ್ಯದಲ್ಲಿ ಯಾವ ತಂಡ ಮೇಲುಗೈ ಸಾಧಿಸಲಿದೆ ಎಂದು ಹೇಳುವುದು ಕಷ್ಟ.
ಹಿಂದೂಸ್ತಾನ್ ಸಮಾಚಾರ್
