ಅಹಮದಾಬಾದ್,17ನವೆಂಬರ್ (ಹಿ.ಸ):
ಆ್ಯಂಕರ್ :2023ರ ವಿಶ್ವಕಪ್ ನ ಎರಡನೇ ಸೆಮಿಫೈನಲ್ನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಆಸ್ಟ್ರೇಲಿಯಾ ಫೈನಲ್ಗೆ ಲಗ್ಗೆ ಇಟ್ಟಿದೆ. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ 8ನೇ ಬಾರಿಗೆ ಫೈನಲ್ಗೆ ಲಗ್ಗೆ ಇಟ್ಟಿದ್ದು, ಫೈನಲ್ ಪಂದ್ಯದಲ್ಲಿ ಅಜೇಯ ಟೀಂ ಇಂಡಿಯಾವನ್ನು ಎದುರಿಸಿಲಿದೆ. ಉಭಯ ತಂಡಗಳ ಈ ಫೈನಲ್ ಕಾಳಗ ನವೆಂಬರ್ 19 ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಕಣಕ್ಕಿಳಿಯುವುದರೊಂದಿಗೆ ಟೀಂ ಇಂಡಿಯಾ ತನ್ನ 20 ವರ್ಷಗಳ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ.
ಹಿಂದೂಸ್ತಾನ್ ಸಮಾಚಾರ್
