
ರಾಯಚೂರು, 4 ನವೆಂಬರ್ (ಹಿ.ಸ):
ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಹಿರಿಯ ಕ್ರೀಡಾಪಟು/ತರಬೇತುದಾಅರಾಗಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಂದ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
2022ನೇ ಸಾಲಿನ ಹಿರಿಯ ಕ್ರೀಡಾಪಟು/ತರಬೇತುದಾರರಾಗಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಜೀವಮಾನ ಸಾಧನೆ ಪ್ರಶಸ್ತಿ ಹಾಗೂ ಗ್ರಾಮೀಣ ಕ್ರೀಡೆಗಳಿಗೆ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಯನ್ನು ನೀಡಲು ಅರ್ಹ ಕ್ರೀಡಾಪಟುಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಅರ್ಹ ಕ್ರೀಡಾಪಟುಗಳು ಇಲಾಖೆಯ ವೆಬ್ಸೈಟ್ http:evasindhu.karnataka.gov.in ರ ಮೂಲಕ ಕೊನೆಯ ನ30 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಜಿಲ್ಲಾ ಕ್ರೀಡಾಂಗಣ ರಾಯಚೂರು ಇವರನ್ನು ಸಂಪರ್ಕಿಸಬಹುದಾಗಿದೆ.
