ನವದೆಹಲಿ, 17 ಮಾರ್ಚ್ :
ಮಹಿಳಾ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ ಎರಡನೇ ಆವೃತ್ತಿಯ ಫೈನಲ್ ಪಂದ್ಯ ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯ ರಾತ್ರಿ ೭.೩೦ಕ್ಕೆ ಆರಂಭವಾಗಲಿದೆ. ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಪ್ರಶಸ್ತಿಗಾಗಿ ಸೆಣಸಾಟ ನಡೆಸಲಿವೆ. ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಗಳಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನೇರವಾಗಿ ಫೈನಲ್ ಪ್ರವೇಶಿಸಿದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಪ್ರಶಸ್ತಿ ಸುತ್ತು ತಲುಪಿದೆ.
