ರಾಜ್ ಕೋಟ್, 14 ಫೆಬ್ರವರಿ : ಆ್ಯಂಕರ್:
ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯವು ಗುರುವಾದಿಂದ (ಫೆ.15) ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಗೆದ್ದರೆ, ದ್ವಿತೀಯ ಟೆಸ್ಟ್ನಲ್ಲಿ ಟೀಮ್ ಇಂಡಿಯಾ ಜಯಭೇರಿ ಬಾರಿಸಿತ್ತು. ಇದೀಗ ಮೂರನೇ ಪಂದ್ಯದಲ್ಲಿ ಗೆಲ್ಲುವ ಮೂಲಕ ಮುನ್ನಡೆ ಸಾಧಿಸುವ ಇರಾದೆಯಲ್ಲಿದೆ ಉಭಯ ತಂಡಗಳು.
ರಾಜ್ ಕೋಟ್ ನ ಸೌರಾಷ್ಟ್ರ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.ಅಂದರೆ ಭಾರತ ತಂಡವು ಟೆಸ್ಟ್ ಕ್ರಿಕೆಟ್ನಲ್ಲಿ ಒಂದೇ ತಂಡದ ವಿರುದ್ಧ ಅತ್ಯಧಿಕ ಗೆಲುವು ದಾಖಲಿಸಿದ ದಾಖಲೆ ಬರೆಯಲು ಇಂಗ್ಲೆಂಡ್ ವಿರುದ್ಧ ಗೆದ್ದರೆ ಸಾಕು. ಸದ್ಯ ಭಾರತ ತಂಡವು ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧ 32 ಪಂದ್ಯಗಳಲ್ಲಿ ಜಯ ಸಾಧಿಸಿದೆ.ಭಾರತ ಮತ್ತು ಇಂಗ್ಲೆಂಡ್ ತಂಡಗಳು ಟೆಸ್ಟ್ ಕ್ರಿಕೆಟ್ನಲ್ಲಿ ಒಟ್ಟು 133 ಪಂದ್ಯಗಳನ್ನಾಡಿದೆ. ಈ ವೇಳೆ ಇಂಗ್ಲೆಂಡ್ 51 ಮ್ಯಾಚ್ಗಳಲ್ಲಿ ಜಯ ಸಾಧಿಸಿದರೆ ಟೀಮ್ ಇಂಡಿಯಾ 32 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ.
