ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿಂದು ದೆಹಲಿಯಲ್ಲಿ ನಡೆಯಲಿರುವ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ರಾತ್ರಿ ೭.೩೦ಕ್ಕೆ ಪಂದ್ಯ ಆರಂಭವಾಗಲಿದೆ. ನಿನ್ನೆ ರಾತ್ರಿ ಇದೇ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಉತ್ತರ ಪ್ರದೇಶ ವಾರಿಯರ್ಸ್ ತಂಡ ಕೇವಲ ಒಂದು ರನ್ನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರೋಚಕ ಗೆಲುವು ದಾಖಲಿಸಿತು. ಉತ್ತರ ಪ್ರದೇಶ ತಂಡದ ಆಲ್ರೌಂಡರ್ ದೀಪ್ತಿ ಶರ್ಮಾ ಹ್ಯಾಟ್ರಿಕ್ ಸೇರಿದಂತೆ ಒಟ್ಟು ೪ ವಿಕೆಟ್ ಪಡೆಯುವ ಮೂಲಕ ತಮ್ಮ ತಂಡದ ಗೆಲುವಿನಲ್ಲಿ ಮಿಂಚಿದರು. ಬ್ಯಾಟಿಂಗ್ನಲ್ಲೂ ಅವರು ೪೮ ಎಸೆತಗಳಲ್ಲಿ ೫೯ ರನ್ ಸಿಡಿಸಿ, ಗಮನಸೆಳೆದರು.
