ನವದೆಹಲಿ, 8 ಫೆಬ್ರವರಿ :
ಆ್ಯಂಕರ್ :
ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಅಂಡರ್-19 ವಿಶ್ವಕಪ್ ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ತಂಡವನ್ನು 2 ವಿಕೆಟ್ಗಳಿಂದ ಸೋಲಿಸುವ ಮೂಲಕ ಭಾರತ ಯುವ ಪಡೆ ಫೈನಲ್ ಗೆ ತನ್ನ ಟಿಕೆಟ್ ಕಾಯ್ದಿರಿಸಿದೆ.
ಈಗ ಟೀಂ ಇಂಡಿಯಾ ಫೆಬ್ರವರಿ 11 ರಂದು ಅಂಡರ್ 19 ವಿಶ್ವಕಪ್ನ ಫೈನಲ್ ಪಂದ್ಯವನ್ನು ಆಡಬೇಕಾಗಿದ್ದು, ಭಾರತ ಯಾವ ತಂಡವನ್ನು ಎದುರಿಸಿದೆ ಎಂಬುದು ಇಂದು ನಿರ್ಧಾರವಾಗಲಿದೆ. ವಾಸ್ತವವಾಗಿ ಅಂಡರ್ 19 ವಿಶ್ವಕಪ್ನ ಎರಡನೇ ಸೆಮಿಫೈನಲ್ನಲ್ಲಿ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ತಂಡಗಳು ಇದೇ ಫೆಬ್ರವರಿ 8 ರಂದು ಮುಖಾಮುಖಿಯಾಗುತ್ತಿವೆ.
ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೆಬ್ರವರಿ 11 ರಂದು ಭಾರತದ ವಿರುದ್ಧ ಫೈನಲ್ ಪಂದ್ಯವನ್ನು ಆಡಲಿದೆ. ಆದರೆ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡವೇ ಭಾರತಕ್ಕೆ ಎದುರಾಳಿಯಾಗಿರಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.
