ಧರ್ಮಶಾಲಾ, 9 ಮೇ : ಆ್ಯಂಕರ್:ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಕಳೆದ ರಾತ್ರಿ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡ ೧೦ ವಿಕೆಟ್ಗಳಿಂದ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಲಖನೌ ತಂಡ ಆಯುಷ್ ಬದೋನಿ ೫೫, ನಿಕೋಲಸ್ ಪೂರನ್ ೪೮ ಮತ್ತು ಕೆ.ಎಲ್ ರಾಹುಲ್ ಅವರ ೨೯ ರನ್ ಗಳ ನೆರವಿನಿಂದ ನಿಗದಿತ ೨೦ ಓವರ್ಗಳಲ್ಲಿ ೪ ವಿಕೆಟ್ ನಷ್ಟಕ್ಕೆ ೧೬೫ ರನ್ ಗಳಿಸಿತು. ಸನ್ ರೈಸರ್ಸ್ ಹೈದರಾಬಾದ್ ಪರ ಭುವನೇಶ್ವರ್ ಕುಮಾರ್ ೨ ಹಾಗೂ ಪ್ಯಾಟ್ ಕಮಿನ್ಸ್ ೧ ವಿಕೆಟ್ ಪಡೆದರು. ೧೬೬ ರನ್ ಗಳ ಗುರಿ ಬೆನ್ನತ್ತಿದ ಸನ್ ರೈಸರ್ಸ್ ಹೈದರಾಬಾದ್ ತಂಡ ಆರಂಭಿಕರಾದ ಟ್ರಾವಿಸ್ ಹೆಡ್ ೮೯ ಹಾಗೂ ಅಭಿಷೇಕ್ ಶರ್ಮಾ ಅವರ ೭೫ ರನ್ ನೆರವಿನಿಂದ ಯಾವುದೇ ವಿಕೆಟ್ ನಷ್ಟವಿಲ್ಲದೇ ೯.೪ ಓವರ್ಗಳಲ್ಲಿ ಗುರಿ ತಲುಪಿತು. ಬ್ಯಾಟಿಂಗ್ನಲ್ಲಿ ಅತ್ಯುತ್ತಮ ನಿರ್ವಹಣೆ ತೋರಿ, ಸನ್ ರೈಸರ್ಸ್ ಹೈದರಾಬಾದ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಟ್ರಾವಿಸ್ ಹೆಡ್, ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಇಂದು ನಡೆಯುವ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ ೭:೩೦ ಕ್ಕೆ ಆರಂಭವಾಗಲಿದೆ.
