ಬೆಂಗಳೂರು, 4 ಮಾರ್ಚ್ :ಆ್ಯಂಕರ್:
ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಅಮೋಘ ಜಯ ದಾಖಲಿಸಿ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ.
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್, 20 ಓವರ್ಗೆ 8 ವಿಕೆಟ್ ನಷ್ಟಕ್ಕೆ 163 ರನ್ ಗಳಿಸಿತ್ತು. ಬೃಹತ್ ಗುರಿ ಬೆನ್ನಟ್ಟಿದ ಗುಜರಾತ್ ತಂಡ 138 ಗಳಿಸಿ 25ರನ್ಗಳ ಸೋಲನೊಪ್ಪಿಕೊಂಡಿತು.
ಇಂದಿನ ಪಂದ್ಯದಲ್ಲಿ ರಾಯಲ್ ಚಾಲೇಂಜರ್ಸ್ ಬೆಂಗಳೂರು ಹಾಗೂ ಯುಪಿ ವಾರಿಯರ್ಸ್ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಣಸಾಡಲಿದೆ. ಈಗಾಗಲೇ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿರುವ ಆರ್ ಸಿ ಬಿ ತಂಡ ಈ ಪಂದ್ಯವನ್ನು ಗೆಲ್ಲಲ್ಲೇ ಬೇಕಾಗಿದ್ದು, ಇಂದಿನ ಪಂದ್ಯ ಮಹತ್ವದಾಗಿದೆ.
