ಟಿ20 ವಿಶ್ವಕಪ್ಗಾಗಿ ಪಾಕಿಸ್ತಾನ್ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಬಾಬರ್ ಆಝಂ ಮುನ್ನಡೆಸಲಿದ್ದಾರೆ. ಈ ತಂಡದಲ್ಲಿ ಕೆಲ ಪ್ರಮುಖ ಬದಲಾವಣೆಗಳು ನಡೆಯಿವೆ. ವೇಗಿ ಹಸನ್ ಅಲಿ ಅವರನ್ನು ಕೈಬಿಡಲಾಗಿದ್ದು, ಅವರ ಸ್ಥಾನದಲ್ಲಿ ಹ್ಯಾರಿಸ್ ರೌಫ್ ಗೆ ಸ್ಥಾನ ಕಲ್ಪಿಸಲಾಗಿದೆ. ಈ ಹಿಂದಿನ ಏಕದಿನ ವಿಶ್ವಕಪ್‌ನಲ್ಲಿ ಕಳಪೆ ಪ್ರದರ್ಶನದಿಂದಾಗಿ ಹ್ಯಾರಿಸ್ ರೌಫ್ ಅವರನ್ನು ತಂಡದಿಂದ ಕೈಬಿಡಲಾಗಿತ್ತು. ಆದರೆ ಈಗ ಮತ್ತೊಮ್ಮೆ ಐಸಿಸಿ ಟೂರ್ನಿಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ನಿವೃತ್ತರಾಗಿದ್ದ ಎಡಗೈ ವೇಗಿ ಮೊಹಮ್ಮದ್ ಅಮೀರ್ ಹಾಗೂ ಆಲ್ ರೌಂಡರ್ ಇಮಾದ್ ವಾಸಿಂ ಕೂಡ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
BulletsIn
- ಟಿ20 ವಿಶ್ವಕಪ್ಗಾಗಿ ಪಾಕಿಸ್ತಾನ್ ತಂಡವನ್ನು ಘೋಷಿಸಲಾಗಿದೆ.
- 15 ಸದಸ್ಯರ ಈ ತಂಡವನ್ನು ಬಾಬರ್ ಆಝಂ ಮುನ್ನಡೆಸಲಿದ್ದಾರೆ.
- ವೇಗಿ ಹಸನ್ ಅಲಿ ಅವರನ್ನು ಕೈಬಿಡಲಾಗಿದ್ದು, ಅವರ ಸ್ಥಾನದಲ್ಲಿ ಹ್ಯಾರಿಸ್ ರೌಫ್ ಗೆ ಸ್ಥಾನ ಕಲ್ಪಿಸಲಾಗಿದೆ.
- ಈ ಬಾರಿಯ ಏಕದಿನ ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಕಳಪೆ ಪ್ರದರ್ಶನದ ಕಾರಣ ಹ್ಯಾರಿಸ್ ರೌಫ್ ಅವರನ್ನು ಪಾಕ್ ತಂಡದಿಂದ ಕೈ ಬಿಡಲಾಗಿತ್ತು.
- ಈಗ ಮತ್ತೊಮ್ಮೆ ಐಸಿಸಿ ಟೂರ್ನಿಯ ತಂಡದಲ್ಲಿ ಹ್ಯಾರಿಸ್ ರೌಫ್ ಸ್ಥಾನ ಪಡೆದಿದ್ದಾರೆ.
- ಎಡಗೈ ವೇಗಿ ಮೊಹಮ್ಮದ್ ಅಮೀರ್ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
- ಅಮೀರ್ 4 ವರ್ಷಗಳ ಹಿಂದೆ ನಿವೃತ್ತಿ ಘೋಷಿಸಿದ್ದರು.
- ಆಲ್ ರೌಂಡರ್ ಇಮಾದ್ ವಾಸಿಂ ಕೂಡ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
- ಇಮಾದ್ ವಾಸಿಂ ಕಳೆದ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದರು.
- ಪಾಕಿಸ್ತಾನ್ ತಂಡದಲ್ಲಿ ಪ್ರಮುಖ ಬದಲಾವಣೆಗಳೊಂದಿಗೆ ತಂಡವನ್ನು ಭರ್ಜರಿ ಪ್ರದರ್ಶನ ನೀಡಲು ಸಜ್ಜಾಗಿದೆ.
