ಬೆಂಗಳೂರು,
ಆ್ಯಂಕರ್:ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿಯಲ್ಲಿಂದು (ಏಪ್ರಿಲ್ 2) ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೇಂಟ್ಸ್ ತಂಡಗಳು ಮುಖಾಮುಖಿಯಾಗಲಿವೆ. ಐಪಿಎಲ್ 2024 ರಲ್ಲಿ ಇದು ಆರ್ಸಿಬಿಯ ನಾಲ್ಕನೇ ಪಂದ್ಯವಾಗಿದ್ದು, ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ.
ಆಡಿರುವ ಮೂರು ಪಂದ್ಯಗಳಿಂದ ಎರಡು ಅಂಕ ಗಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ಲಕ್ನೋ ಎರಡು ಪಂದ್ಯದಿಂದ 2 ಅಂಕಗಳನ್ನು ಹೊಂದಿ ಆರನೇ ಸ್ಥಾನದಲ್ಲಿದೆ. ಪಾಯಿಂಟ್ಸ್ ಟೇಬಲ್ನಲ್ಲಿ ಮೇಲೇಳಲು ಆರ್ಸಿಬಿ ಈ ಪಂದ್ಯ ಗೆಲ್ಲಲೇ ಬೇಕಿದೆ.
ಮಾರ್ಚ್ 22 ರಂದು ನಡೆದ ಪಂದ್ಯಾವಳಿಯ ಆರಂಭಿಕ ಪಂದ್ಯದಲ್ಲಿ ಆರ್ಸಿಬಿ, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತಿತು. ಬಳಿಕ ಮಾರ್ಚ್ 25 ರಂದು ಪಂಜಾಬ್ ಕಿಂಗ್ಸ್ ವಿರುದ್ಧ ಕೊನೆಯ ಓವರ್ನಲ್ಲಿ ಗೆದ್ದು ಜಯದ ಖಾತೆ ತೆರೆದರೆ, ಕಳೆದ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಹೀನಾಯ ಸೋಲು ಕಂಡಿತ್ತು. ಸೋತ ಎಲ್ಲ ಪಂದ್ಯಗಳಲ್ಲಿ ಆರ್ಸಿಬಿ ಸೋಲಿಗೆ ಬೌಲರ್ಗಳು ಮುಖ್ಯಕಾರಣರಾದರು. ಇಂದು ಉಭಯ ತಂಡಗಳಿಗೆ ಗೆಲುವು ಮುಖ್ಯವಾಗಿರುವ ಕಾರಣ ಬೆಂಗಳೂರಿನಲ್ಲಿ ಹೈವೋಲ್ಟೇಜ್ ಪಂದ್ಯ ಆಗುವುದು ಖಚಿತ.
