
ನವದೆಹಲಿ, 10 ಮಾರ್ಚ್:
ಕಳೆದ ರಾತ್ರಿ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗುಜರಾತ್ ಜೈಂಟ್ಸ್ ತಂಡವನ್ನು ಏಳು ವಿಕೆಟ್ ಗಳಿಂದ ಪರಾವಭಗೊಳಿಸಿತು. ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಗುಜರಾತ್ ತಂಡ ನಿಗದಿತ ೨೦ ಓವರ್ ಗಳಲ್ಲಿ ೭ ವಿಕೆಟ್ ನಷ್ಟಕ್ಕೆ ೧೯೦ ರನ್ ಗಳಿಸಿತು. ಹೇಮಲತಾ ೭೪ ಮತ್ತು ಬೆತ್ ಮೂನಿ ೬೬ ರನ್ ಗಳಿಸಿದರು. ಇದಕ್ಕೆ ಉತ್ತರವಾಗಿ ಗುರಿ ಬೆನ್ನತ್ತಿದ ಮುಂಬೈ ತಂಡ, ಹರ್ಮನ್ ಪ್ರೀತ್ ಕೌರ್ ಮತ್ತು ಯಸ್ತಿಕಾ ಭಾಟಿಯಾ ಕ್ರಮವಾಗಿ ಗಳಿದ ೯೫ ಮತ್ತು ೪೯ ರನ್ ಗಳ ನೆರವಿನಿಂದ ೧೯.೫ ಓವರ್ ಗಳಲ್ಲಿ ಗುರಿ ಮುಟ್ಟಿತು.
ಇಂದು ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ ೭. ೩೦ ಕ್ಕೆ ಆರಂಭವಾಗಲಿದೆ.
