ದೆಹಲಿಯ ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ ಕಳೆದ ರಾತ್ರಿ ನಡೆದ ಮಹಿಳಾ ಪ್ರೀಮಿಯರ್ ಕ್ರಿಕೆಟ್ ಲೀಗ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಜೈಂಟ್ಸ್ ತಂಡವನ್ನು ೭ ವಿಕೆಟ್ಗಳಿಂದ ಸೋಲಿಸಿದೆ. ಡೆಲ್ಲಿ ಕ್ಯಾಪಿಟಲ್ ೧೩.೧ ಓವರ್ಗಳಲ್ಲಿ ೧೨೯ ರನ್ ಗಳಿಸಿತು. ಇದಕ್ಕೂ ಮುನ್ನ ಗುಜರಾತ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ಗೆ ಗೆಲ್ಲಲು ೧೨೭ ರನ್ಗಳನ್ನು ನೀಡಿತ್ತು. ಬೆತ್ ಮೂನಿ ನೇತೃತ್ವದ ಗುಜರಾತ್ ಜೈಂಟ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಗುಜರಾತ್ ಜೈಂಟ್ಸ್ ನಿಗದಿತ ೨೦ ಓವರ್ಗಳಲ್ಲಿ ೯ ವಿಕೆಟ್ ನಷ್ಟಕ್ಕೆ ೧೨೮ ರನ್ ಗಳಿಸಿತು. ಈ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನವನ್ನು ಕಾಯ್ದುಕೊಂಡು ನೆರವಾಗಿ ಫೈನಲ್ ಪ್ರವೇಶಿಸಿದೆ. ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಾಳೆ ಪ್ಲೆಆಫ್ ಪಂದ್ಯ ನಡೆಯಲಿದ್ದು, ಭಾನುವಾರ ದೆಹಲಿ ಕ್ರೀಡಾಂಗಣದಲ್ಲಿ ಅಂತಿಮ ಪಂದ್ಯ ನಡೆಯಲಿದೆ.
