ಬೆಂಗಳೂರು, 27 ಫೆಬ್ರವರಿ :ಆ್ಯಂಕರ್:
ವುಮೆನ್ಸ್ ಪ್ರೀಮಿಯರ್ ಲೀಗ್ ನ 5ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಉಭಯ ತಂಡಗಳು ಈಗಾಗಲೇ ಮೊದಲ ಪಂದ್ಯವನ್ನಾಡಿದೆ. ಆರ್ ಸಿ ಬಿ ಗೆಲುವಿನೊಂದಿಗೆ ಶುಭಾರಂಭ ಮಾಡಿದ್ದರೆ, ಅತ್ತ ಗುಜರಾತ್ ಜೈಂಟ್ಸ್ ಸೋಲನುಭವಿಸಿದೆ. ಹೀಗಾಗಿ ಇಂದಿನ ಮೊದಲ ಗೆಲುವಿಗಾಗಿ ಬೆತ್ ಮೂನಿ ಪಡೆ ಕಣಕ್ಕಿಳಿಯಲಿದೆ.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ 2 ರನ್ಗಳ ರೋಚಕ ಜಯ ಸಾಧಿಸಿರುವ ಆರ್ಸಿಬಿ ಈ ಮ್ಯಾಚ್ನಲ್ಲೂ ಗೆಲ್ಲುವ ಮೂಲಕ ಗೆಲುವಿನ ಲಯ ಮುಂದುವರೆಸುವ ಇರಾದೆಯಲ್ಲಿದೆ. ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಸೋತಿರುವ ಗುಜರಾತ್ ಜೈಂಟ್ಸ್ ಈ ಪಂದ್ಯದ ಮೂಲಕ ಗೆಲುವಿನ ಖಾತೆ ತೆರೆಯುವ ವಿಶ್ವಾಸದಲ್ಲಿದೆ.
ಇತ್ತ ಈ ಪಂದ್ಯವು ಬೆಂಗಳೂರಿನಲ್ಲೇ ನಡೆಯುತ್ತಿರುವುದರಿಂದ ಆರ್ಸಿಬಿ ತಂಡಕ್ಕೆ ಅಭಿಮಾನಿಗಳ ಬೆಂಬಲ ಸಿಗಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಗೆಲ್ಲುವ ಫೇವರೇಟ್ ಆಗಿ ಆರ್ಸಿಬಿ ಗುರುತಿಸಿಕೊಂಡಿದೆ. ಆದರೆ ಅತ್ತ ಅತ್ಯುತ್ತಮ ಆಲ್ರೌಂಡರ್ಗಳನ್ನು ಒಳಗೊಂಡ ಗುಜರಾತ್ ಜೈಂಟ್ಸ್ ಕಡೆಯಿಂದ ಕಠಿಣ ಪೈಪೋಟಿ ಎದುರಾಗುವ ನಿರೀಕ್ಷೆಯಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.
