ಚೆನ್ನೈ, 23ಅಕ್ಟೋಬರ್ :
ಆ್ಯಂಕರ್ :
ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿಂದು ನಡೆಯಲಿರುವ 22ನೇ ಪಂದ್ಯದಲ್ಲಿ ಬಾಬರ್ ಅಝಂ ನಾಯಕತ್ವದ ಪಾಕಿಸ್ತಾನ ಹಾಗೂ ಹಶ್ಮತುಲ್ಲಾ ಶಾಹಿದಿ ನೇತೃತ್ವದ ಅಫ್ಘಾನಿಸ್ತಾನ ತಂಡಗಳು ಮುಖಾಮುಖಿ ಆಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಆಡಿರುವ ನಾಲ್ಕು ಪಂದ್ಯಗಳ ಪೈಕಿ ತಲಾ ಎರಡರಲ್ಲಿ ಸೋಲು-ಗೆಲುವು ಕಂಡಿರುವ ಪಾಕ್ಗೆ ಈ ಪಂದ್ಯ ಮಹತ್ವದ್ದಾಗಿದೆ. ಪಾಯಿಂಟ್ ಟೇಬಲ್ನಲ್ಲಿ ಮೇಲೇಳಲು ಬಾಬರ್ ಪಡೆಗೆ ಇದೊಂದು ಉತ್ತಮ ಅವಕಾಶ. ಇತ್ತ ಅಫ್ಘಾನ್ ಪಡೆ ಆಡಿರುವ ನಾಲ್ಕು ಪಂದ್ಯಗಳ ಪೈಕಿ ಕೇವಲ ಒಂದರಲ್ಲಷ್ಟೆ ಗೆದ್ದು ಪಾಯಿಂಟ್ ಟೇಬಲ್ನಲ್ಲಿ ಕೊನೆಯ ಸ್ಥಾನದಲ್ಲಿದೆ.
