ಜೋಹಾನ್ಸ್ಬರ್ಗ್, 17 ಡಿಸೆಂಬರ್(ಹಿ.ಸ):
ಆ್ಯಂಕರ್ :
ಜೋಹಾನ್ಸ್ಬರ್ಗ್ನ ನ್ಯೂ ವಂಡರರ್ಸ್ ಸ್ಟೇಡಿಯಂನಲ್ಲಿ ಇಂದು ಭಾರತ-ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಲ್ಲಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್ ಇದಾಗಿದ್ದು, ಹೀಗಾಗಿ ಉಭಯ ತಂಡಗಳು ಶುಭಾರಂಭ ಮಾಡುವ ಇರಾದೆಯಲ್ಲಿದೆ. ಅದರಲ್ಲೂ ಏಕದಿನ ವಿಶ್ವಕಪ್ ಫೈನಲ್ ಪಂದ್ಯದ ಸೋಲಿನ ಬಳಿಕ ಟೀಮ್ ಇಂಡಿಯಾ ಮೊದಲ ಏಕದಿನ ಪಂದ್ಯವಾಡುತ್ತಿದೆ. ಆದರೆ ಈ ಸರಣಿಗೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಶಮಿ ಅಲಭ್ಯರಾಗಿದ್ದಾರೆ.
ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಭಾರತ ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
