ಬೆಂಗಳೂರು, 3 ಡಿಸೆಂಬರ್(ಹಿ.ಸ):
ಆ್ಯಂಕರ್ :
ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ 3-1 ಮುನ್ನಡೆಸಿ ಸಾಧಿಸಿ ಸರಣಿ ವಶಪಡಿಸಿಕೊಂಡಿರುವ ಭಾರತ ತಂಡ ಇದೀಗ ಅಂತಿಮ ಕದನಕ್ಕೆ ಸಜ್ಜಾಗಿದೆ. ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂಡೋ-ಆಸೀಸ್ ನಡುವೆ ಐದನೇ ಟಿ20 ಪಂದ್ಯ ಆಯೋಜಿಸಲಾಗಿದೆ. ಟೀಮ್ ಇಂಡಿಯಾಕ್ಕೆ ಇದೊಂದು ಔಪಚಾರಿಕ ಪಂದ್ಯವಾಗಿದ್ದರೆ, ಕಾಂಗರೂ ಪಡೆ ಪ್ರತಿಷ್ಠೆಗಾಗಿ ಕೊನೆಯ ಪಂದ್ಯವನ್ನು ಗೆಲ್ಲುವ ಪ್ಲಾನ್ನಲ್ಲಿದೆ. ಹೀಗಾಗಿ ಇಂದಿನದು ಹೈವೋಲ್ಟೇಜ್ ಪಂದ್ಯ ಆಗುವುದು ಖಚಿತ.
ಬ್ಯಾಟರ್ಗಳ ಭರ್ಜರಿ ಫಾರ್ಮ್:
ಭಾರತದ ಯುವ ಬ್ಯಾಟಿಂಗ್ ಲೈನ್-ಅಪ್ ಸಾಕಷ್ಟು ಬಲಿಷ್ಠವಾಗಿದೆ. ರುತುರಾಜ್ ಗಾಯಕ್ವಾಡ್ ಹಾಗೂ ಯಶಸ್ವಿ ಜೈಸ್ವಾಲ್ ಸ್ಫೋಟಕ ಆರಂಭ ಒದಗಿಸುತ್ತಿದ್ದರೆ, ರಿಂಕು ಸಿಂಗ್ ಅತ್ಯುತ್ತಮ ಫಾರ್ಮ್ನಲ್ಲಿದ್ದಾರೆ. ಪಂದ್ಯದ ಅಗತ್ಯಕ್ಕೆ ತಕ್ಕಂತೆ ಬ್ಯಾಟಿಂಗ್ ಮಾಡುತ್ತಿದ್ದಾರೆ. ಸರಣಿಯ ಮೊದಲ ಪಂದ್ಯವನ್ನು ಆಡಿದ ಜಿತೇಶ್ ಶರ್ಮಾ ಭರವಸೆ ಮೂಡಿಸಿದ್ದಾರೆ. ಆದರೆ, ಶ್ರೇಯಸ್ ಅಯ್ಯರ್ ವಿಫಲರಾಗಿದ್ದಾರೆ. ನಾಯಕ ಸೂರ್ಯಕುಮಾರ್ ಕೂಡ ರನ್ ಮಳೆ ಸುರಿಸಬೇಕು. ಆಲ್ರೌಂಡರ್ ಜವಾಬ್ದಾರಿ ಅಕ್ಷರ್ ಪಟೇಲ್ ನಿಭಾಯಿಸಬೇಕಿದೆ.
ಹಿಂದೂಸ್ತಾನ್ ಸಮಾಚಾರ್
