ಕೇಪ್ ಟೌನ್, 3 ಜನವರಿ(ಹಿ.ಸ):
ಆ್ಯಂಕರ್ :
ಕೇಪ್ ಟೌನ್ ನ ನ್ಯೂಲ್ಯಾಂಡ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ – ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟೆಸ್ಟ್ ಕ್ರಿಕೆಟ್ ಪಂದ್ಯ ಇಂದಿನಿಂದ ಆರಂಭವಾಗಲಿದೆ. ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ ೧.೩೦ಕ್ಕೆ ಆರಂಭವಾಗಲಿದೆ. ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಈ ಪಂದ್ಯ ಗೆದ್ದು ಸರಣಿ ಸಮಬಲ ಮಾಡುವತ್ತ ಗಮನ ಹರಿಸಿದೆ. ಈಗಾಗಲೇ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದಿರುವ ದಕ್ಷಿಣ ಆಫ್ರಿಕಾ ೧-೦ ಮುನ್ನಡೆಯಲಿದೆ. ಭಾರತ ತಂಡದಲ್ಲಿ ಆರ್ ಅಶ್ವಿನ್ ಬದಲಿಗೆ ರವೀಂದ್ರ ಜಡೇಜಾ ಅವರನ್ನು ಹಾಗೂ ಮುಕೇಶ್ ಕುಮಾರ್ ಬದಲಿಗೆ ಪ್ರಸಿಧ್ ಕೃಷ್ಣ ಅವರನ್ನು ಸೇರ್ಪಡೆ ಮಾಡಿಕೊಳ್ಳಲಾಗುತ್ತಿದೆ. ೨೦೨೩-೨೫ರ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ನ ಫೈನಲ್ ಹಂತ ತಲುಪಲು ಈ ಪಂದ್ಯ ಪ್ರಮುಖವಾಗಿದ್ದು. ಈ ಪಂದ್ಯದ ಫಲಿತಾಂಶ ಅಂಕ ಪಟ್ಟಿಯಲ್ಲಿ ಮಹತ್ವದ ಬದಲಾವಣೆಯನ್ನುಂಟು ಮಾಡಲಿದೆ.
ಹಿಂದೂಸ್ತಾನ್ ಸಮಾಚಾರ್
