
ಮುಂಬೈ, 30 ಡಿಸೆಂಬರ್(ಹಿ.ಸ):
ಆ್ಯಂಕರ್ :
ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರು ಪಂದ್ಯಗಳ ಮಹಿಳಾ ಏಕದಿನ ಕ್ರಿಕೆಟ್ ಸರಣಿಯ ಎರಡನೇ ಪಂದ್ಯ ಇಂದು ಮುಂಬೈನಲ್ಲಿ ನಡೆಯಲಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ಮಧ್ಯಾಹ್ನ ೧.೩೦ಕ್ಕೆ ಪಂದ್ಯ ಆರಂಭವಾಗಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ಭಾರತದ ಆಟಗಾರ್ತಿಯರು ೮ ವಿಕೆಟ್ಗಳಿಂದ ಸೋಲನುಭವಿಸಿದ್ದರು. ಸರಣಿ ಗೆಲ್ಲುವಾಸೆ ಜೀವಂತವಾಗಿರಿಸಿಕೊಳ್ಳಬೇಕಾದರೆ ಭಾರತ ಇಂದಿನ ಪಂದ್ಯದಲ್ಲಿ ಗೆಲುವು ದಾಖಲಿಸುವುದು ಅಗತ್ಯವಾಗಿದೆ. ಹರ್ಮನ್ ಪ್ರೀತ್ ಕೌರ್ ನಾಯಕತ್ವದ ಭಾರತದ ವನಿತೆಯರ ತಂಡ ಉತ್ತಮ ಪ್ರದರ್ಶನ ನೀಡುತ್ತಿದ್ದು, ಆಸ್ಟ್ರೇಲಿಯಾ ಎದುರು ಗೆಲ್ಲುವ ವಿಶ್ವಾಸ ಹೊಂದಿದೆ.
ಹಿಂದೂಸ್ತಾನ್ ಸಮಾಚಾರ್
