
ಕೊಪ್ಪಳ, 8 ನವೆಂಬರ್ (ಹಿ.ಸ):
ಆ್ಯಂಕರ್ : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಕೊಪ್ಪಳ ಹಾಗೂ ಕೊಪ್ಪಳ ಶ್ರೀ ಶಾರದಾ ಫೌಂಡೇಶನ್ ಟ್ರಸ್ಟ್ (ಲಿ) ಕಿಡದಾಳ ಶ್ರೀ ಶಾರದಾ ಪದವಿಪೂರ್ವ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ 2023-24ನೇ ಸಾಲಿನ ನೆಟ್ಬಾಲ್ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮವನ್ನು ನವೆಂಬರ್ 10 ರಂದು ಬೆಳಿಗ್ಗೆ 10.30 ಗಂಟೆಗೆ ಕಿಡದಾಳ ಗ್ರಾಮದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಏರ್ಪಡಿಸಲಾಗಿದೆ.
ಕ್ರೀಡಾಕೂಟವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಉದ್ಘಾಟಿಸುವರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ಕ್ರೀಡಾ ಧ್ವಜಾರೋಹಣ ನೆರವೇರಿಸುವರು.
ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು. ಸಂಸದ ಕರಡಿ ಸಂಗಣ್ಣ ಕ್ರೀಡಾ ಜ್ಯೋತಿ ಬೆಳಗಿಸುವರು.
ಮುಖ್ಯ ಅತಿಥಿಗಳಾಗಿ ಶಾಸಕರಾದ ಬಸವರಾಜ ರಾಯರೆಡ್ಡಿ, ದೊಡ್ಡನಗೌಡ ಹನುಮಗೌಡ ಪಾಟೀಲ ಹಾಗೂ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಹಾಲವರ್ತಿ ಗ್ರಾಮ ಪಂಚಾಯತ್ನ ಅಧ್ಯಕ್ಷರಾದ ಮುದಿಯಪ್ಪ ಅದೋನಿ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಿತೇಶಕುಮಾರ ಸಿಂಗ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ.ಮೋಹನರಾಜ್, ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ನಿರ್ದೇಶಕರಾದ ಸಿಂಧೂ. ಬಿ. ರೂಪೇಶ, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿಗಳಾದ ಯಶೋಧಾ ವಂಟಗೋಡಿ, ಶಾಲಾ ಶಿಕ್ಷಣ ಇಲಾಖೆ (ಪ.ಪೂ), ಬೆಂಗಳೂರು ಕ್ರೀಡಾವಿಭಾಗದ ಸಹಾಯಕ ನಿರ್ದೇಶಕರಾದ ಸಿ.ಜಿ.ರಮೇಶ, ಕಿಡದಾಳ ಶ್ರೀ ಶಾರದಾ ಫೌಂಡೇಷನ್ ಟ್ರಸ್ಟ್ (ದಿ) ಅಧ್ಯಕ್ಷರಾದ ವಿ. ಆರ್. ಪಾಟೀಲ, ಕಾರ್ಯದರ್ಶಿಗಳಾದ ಎಸ್.ಆರ್. ಪಾಟೀಲ, ನಿರ್ದೇಶಕರಾದ ಕಿರಣ್ ವಿ. ಪಾಟೀಲ, ಶಿವಪ್ರಕಾಶ ಬೊಟ್ಟನಕೇರಿ, ಬೆಂಗಳೂರು ನೆಟ್ಬಾಲ್ ಸಂಸ್ಥೆಯ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಗಿರೀಶ್ ಸಿ., ಕೊಪ್ಪಳ ನೆಟ್ಬಾಲ್ ಸಂಸ್ಥೆಯ ಜಿಲ್ಲಾ ಕಾರ್ಯಾಧ್ಯಕ್ಷರಾದ ಅಬ್ದುಲ್ ರಜಾಕ್ ಟೇಲರ್ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ನಾಗೇಶ ಬಾಬು, ಶಾರದಾ ಇಂಟರ್ ನ್ಯಾಷನಲ್ ಸ್ಕೂಲ್ ಪ್ರಾಂಶುಪಾಲರಾದ ಡಾ.ಚಕ್ರವರ್ತಿ, ಕೊ.ಪ.ಪೂ.ಕಾ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಸೋಮಶೇಖರಗೌಡ, ಕೊಪ್ಪಳ (ಕ್ರೀಡೆ) ದೈಹಿಕ ಶಿಕ್ಷಣ ಉಪನ್ಯಾಸಕರು ಮತ್ತು ತಾಲೂಕು ಸಂಚಾಲಕರಾದ ಈಶಪ್ಪ ದೊಡ್ಡಮನಿ, ಕೊಪ್ಪಳ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕರಾದ ಜಗದೀಶ ಜಿ. ಹೆಚ್., ಕೊ.ಪ.ಪೂ.ಕಾ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಅನಿಲಕುಮಾರ ಜಿ., ಕೊಪ್ಪಳ ದೈಹಿಕ ಶಿಕ್ಷಣ ಉಪನ್ಯಾಸಕರು ಹಾಗೂ ಕ್ರೀಡಾ ಸಂಯೋಜಕರಾದ ತಿರುಪತಿ ನಾಯಕ ಅವರು ಉಪಸ್ಥಿತರಿರುವರು ಎಂದು ತಿಳಿಸಿದೆ.
