
ಕೊಪ್ಪಳ, 3 ಜನವರಿ(ಹಿ.ಸ):
ಆ್ಯಂಕರ್ : 2024-25ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ಶಾಲೆ ವಸತಿ ನಿಲಯಗಳಿಗೆ ಪ್ರವೇಶ ನೀಡುವ ಸಂಬಂಧ ಜನವರಿ 05 ಮತ್ತು ಜನವರಿ 06ರಂದು ಕೊಪ್ಪಳದಲ್ಲಿ ಜರುಗಬೇಕಾಗಿದ್ದ ಆಯ್ಕೆ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ.
ಮುಂದುವರೆದು, ಜನವರಿ 5 ಮತ್ತು ಜನವರಿ 06ರಂದು ಜಿಲ್ಲಾ ಕ್ರೀಡಾಂಗಣ, ಬಳ್ಳಾರಿ ಜಿಲ್ಲೆಯಲ್ಲಿ ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆಯನ್ನು ಆಯೋಜಿಸಲಾಗುತ್ತಿದೆ.
ಜಿಲ್ಲಾ ಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಆಯ್ಕೆಯಾದ ಕ್ರೀಡಾಪಟುಗಳು ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
