ಲಖನೌ, 16ಅಕ್ಟೋಬರ್ (ಹಿ.ಸ):
ಆ್ಯಂಕರ್ :ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಇಂದು ನಡೆಯಲಿರುವ 14ನೇ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ಮತ್ತು ಕುಸಲ್ ಮೆಂಡೀಸ್ ನೇತೃತ್ವದ ಶ್ರೀಲಂಕಾ ತಂಡಗಳು ಮುಖಾಮುಖಿ ಆಗಲಿದೆ. ಲಖನೌದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಇದು ಸೋತವರ ಕಾಳಗ ಎನ್ನಬಹುದು. ಯಾಕೆಂದರೆ ಉಭಯ ತಂಡಗಳು ಇದುವರೆಗೆ ಆಡಿರುವ ಎರಡೂ ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ ಆಸೀಸ್-ಲಂಕಾ ತಂಡ ಮೊದಲ ಗೆಲುವಿಗಾಗಿ ಹಾತೊರೆಯುತ್ತಿದೆ.
ಹಿಂದೂಸ್ತಾನ್ ಸಮಾಚಾರ್
